ರಾಜ್ಯ

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಆರ್​ಸಿಬಿ ಸೋಲಿಗೆ ಮ್ಯಾನೇಜ್​ಮೆಂಟ್​ನ ಕೆಲವರು ದೂರುತ್ತಿದ್ದಾರೆ. ಇನ್ನೂ ಕೆಲವರು ತಂಡ ಪರ್ಫಾರ್ಮೆನ್ಸ್​​ನ ತೆಗಳುತ್ತಿದ್ದಾರೆ. ದರ್ಶನ್ (Darshan) ಅವರ ಕೆಲ ಅಭಿಮಾನಿಗಳು ಮಾತ್ರ ಆರ್​ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ದೂರಿದ್ದಾರೆ. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು. ಇದಕ್ಕೆ ದರ್ಶನ್ ಅಭಿಮಾನಿಗಳ ಥಿಯರಿ ತುಂಬಾನೇ ಕೀಳುಮಟ್ಟದ್ದು.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ ಕೆಲವರು ‘ದರ್ಶನ್ ಅವರು ಫ್ಯಾನ್ಸ್​ಗೆ ಬುದ್ಧಿವಾದ ಹೇಳಬೇಕು’ ಎಂದಿದ್ದಾರೆ. ಈ ರೀತಿ ಪೋಸ್ಟ್ ಮಾಡಿದ್ದು ನಿಜಕ್ಕೂ ದರ್ಶನ್ ಅಭಿಮಾನಿಯೇ ಅಥವಾ ಫೇಕ್ ಖಾತೆಯೇ ಎಂಬ ಪ್ರಶ್ನೆಯೂ ಮೂಡಿದೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button