ರಾಜ್ಯ
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ
ಬೆಂಗಳೂರು: ಎಐಸಿಸಿಯಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಮಾಡಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಇನ್ನೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಲಾಗಿರುವುದಾಗಿ ತಿಳಿಸಿದ್ದಾರೆ.