ಸುದ್ದಿ
ಕೊಡಗು:- ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮದ ಪ್ರಚಾರ ಅಭಿಯಾನ
ಕೊಡ್ಲಿಪೇಟೆ: “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಶೀರ್ಷಿಕೆಯೊಂದಿಗೆ ಆಗಸ್ಟ್ 15 ರಂದು ದೇಶದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸಂಜೆ 4 ಗಂಟೆಗೆ ಸುಂಟಿಕೊಪ್ಪದಲ್ಲಿ ನಡೆಯುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮದ ಪ್ರಚಾರ ಕೊಡ್ಲಿಪೇಟೆ ಎಸ್ ಕೆ ಎಸ್ ಎಸ್ ಎಫ್ ಶಾಖಾ ಕಚೇರಿಯಲ್ಲಿ ನಡೆಯಿತು. ಪ್ರಚಾರ ಕಾರ್ಯಕ್ರಮದಲ್ಲಿ SYS ಕೊಡಗು ಉಪಾಧ್ಯಕ್ಷರಾದ ಹಂಸ ಹಾಜಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಫೈಝಿ, ಪ್ರಮುಖರಾದ ಹಮೀದ್ ಮೌಲವಿ, ಜಿಲ್ಲಾ ನಾಯಕರುಗಳು, ಎಸ್ ವೈ ಎಸ್ ಆಮಿಲಾ ಉಪಾಧ್ಯಕ್ಷರಾದ ಅಬ್ದುಲ್ ರಹಮಾನ್, ಸದಸ್ಯರುಗಳಾದ ಉಮ್ಮರ್, ಶೇಖಬ್ಬ , ಎಸ್ ಕೆ ಎಸ್ ಎಸ್ ಎಫ್ ಜೊತೆ ಕಾರ್ಯದರ್ಶಿ ಮುಸ್ತಫಾ ಸಬ್ಬಿ ಹಾಗೂ ಶಾಖೆಯ ಇತರ ಸದಸ್ಯರುಗಳು ಭಾಗವಹಿಸಿದ್ದರು.
ವರಧಿಗಾರರು
ಫ್ರೆಡ್ಡಿ ಪಿ ಸಿ