ಸುದ್ದಿ

ನಾಳೆ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button