ಕ್ರೈಂ
ಮಂಗಳೂರು :ಧರ್ಮಸ್ಥಳ ಕಲ್ಲೇರಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕಲ್ಲೇರಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಕಲ್ಲೇರಿ ನಿವಾಸಿ ಸುರೇಶ್ ಗೌಡ 52ಎಂಬವರಾಗಿದ್ದರೆ.ಇವರ ಕಳೆದ ಕೆಲ ದಿನಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದುವ ನ 26 ರಿಂದ ನಾಪತ್ತೆಯಾಗಿದ್ದರು.ಶುಕ್ರವಾರ ಬೆಳಗ್ಗೆ ಇವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮೃತದೇಹವನ್ನು ಬಾವಿಯಿಂದ ಮೇಲೆತ್ತಲು ಸಹಕರಿಸಿದರು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.