ರಾಜ್ಯ
ಮಂಗಳೂರು :ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ.
ಬೆಳ್ತಂಗಡಿ: ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಮ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.