ಸುದ್ದಿ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ರೇ*ಪ್ FIR

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿದೆ.

ಎಸ್ ಐಟಿ ವಿಚಾರಣೆ ವೇಳೆ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಅವರು ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದು, ಈ ಸಂಬಂಧ ಸಿಐಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇದರ ಮೇರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ವಿರುದ್ಧ ಮೂರು ಪ್ರಕರಣಗಳು ದಾಖಲಾದಂತಾಗಿದೆ.

ಇನ್ನು ಅತ್ಯಾಚಾರ ನಡೆದಿರುವ ಬಗ್ಗೆ ನ್ಯಾಯಾಧೀಶರ ಮುಂದೆ ಒಪ್ಪಿಕೊಳ್ಳಲು ಸಂತ್ರಸ್ತೆ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಶೀಘ್ರದಲ್ಲೇ ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button