ಸುದ್ದಿ

ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ

ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ

ಬೆಂಗಳೂರು: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಅದರಲ್ಲಿ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದ್ದಾರೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button