ಸುದ್ದಿ

ಸಿಎಂ ಸಿದ್ದರಾಮಯ್ಯ ಗೆ ಉಚಿತ ಬಸ್ ಟಿಕೆಟ್ ಗಳ ಮಾಲೆ ಹಾಕಿದ ವಿದ್ಯಾರ್ಥಿನಿ

ಅರಸೀಕೆರೆ : ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ವಿದ್ಯಾರ್ಥಿನಿಯೊಬ್ಬರು ಉಚಿತ ಬಸ್ ಟಿಕೆಟ್ ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿರುವ ಘಟನೆ ನಡೆದಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದಿದ್ದಾರೆ.

ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.

‘ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ” ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು ಎಂದಿದ್ದಾರೆ.

‘ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು’ ಎಂದು ಹಾರೈಸಿದೆ ಎಂದ ಹೇಳಿದ್ದಾರೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button