ಸುದ್ದಿ
ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆ ಗೌಡ ಆತ್ಮ**ಹತ್ಯೆ
ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡರವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.