ರಾಜ್ಯ

ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button