ಕೊಡಗು :-ಸುಳ್ಳು ದಾಖಲೆ ನೀಡಿ ವಂಚಿಸುವವರಿಗೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಾಹ?
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ
ರಾಜ್ಯಾಧ್ಯಾಂತ ಕೆಲವು ಮೇಲ್ವರ್ಗದ ಸಮುದಾಯಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸರಕಾರದಿಂದ ಉಧ್ಯೋಗವಕಾಶಗಳನ್ನು ಹಾಗೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವುದು
ಕಂಡು ಬರುತ್ತಿದೆ. ಇದರಿಂದ
ಮೂಲ ಹಾಗೂ ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೌಲಭ್ಯದಿಂದ ವಂಚಿತರಾಗಿ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಇದೊಂದು ರೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲೆ ನೆಡೆಯುತ್ತಿರುವ ಶೋಷಣೆ ಹಾಗೂ ದೌರ್ಜನ್ಯ ವಾಗಿರುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತಿದ್ದೇನೆ.
ವರದಿಗಾರರು : ಫ್ರೆಡ್ಡಿ PC