ಸುದ್ದಿ

ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡ – ದೂರು ಧಾಖಲು

ಚನ್ನಪಟ್ಟಣ: ತಾಲ್ಲೂಕಿನ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡವೊಂದು ನಿರ್ಮಾಣವಾಗುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ರಾಮನಗರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಶುಕ್ರವಾರ ದೂರು ನೀಡಿದ್ದಾರೆ

ಚಿಕ್ಕಮಣ್ಣುಗುಡ್ಡೆ ಅರಣ್ಯಪ್ರದೇಶದಲ್ಲಿ ಕೆಂಗಲ್ ಹಾಗೂ ದೇವರದೊಡ್ಡಿ ರಸ್ತೆಗೆ ಹೊಂದಿಕೊಂಡಂತೆ ಸುಮಾರು ಎರಡು ತಿಂಗಳಿನಿಂದ ಹೋಟೆಲ್ ಅಥವಾ ಬಾರ್ ಅನ್ನು ಹೋಲುವ ರೀತಿಯಲ್ಲಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಇದರಲ್ಲಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಇಲಾಖೆ ಪ್ರತಿಕ್ರಿಯೆ: ‘ಅರಣ್ಯ ಜಾಗದಲ್ಲಿ ವ್ಯಕ್ತಿಯೊಬ್ಬರು ಕಟ್ಟಡ ಕಟ್ಟುತ್ತಿರುವ ವಿಷಯ ಗೊತ್ತಾದ ತಕ್ಷಣ ಜಾಗಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣವನ್ನು ತಡೆಯಲಾಗಿದೆ. ಆದರೆ ಆ ವ್ಯಕ್ತಿಯು ಜಾಗ ತಮಗೆ ಸೇರಿದ್ದು ಎಂದು ತಿಳಿಸಿ ಸ್ಥಳಕ್ಕೆ ಸಂಬಂಧಪಟ್ಟಂತೆ ಪಹಣಿಯನ್ನು ನೀಡಿರುತ್ತಾರೆ. ಆದರೆ ಜಾಗಕ್ಕೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಇಲಾಖೆಗೆ ಹಾಜರುಪಡಿಸುವಂತೆ ಸೂಚಿಸಲಾಗಿದೆ. ಆ ವ್ಯಕಿಯು ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಚನ್ನಪಟ್ಟಣ ವಲಯ ಅರಣ್ಯಾಧಿಕಾರಿ ಕಿರಣ್ ಪ್ರತಿಕ್ರಿಯಿಸಿದ್ದಾರೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button