ಸುದ್ದಿ

ದಲಿತ ಮಹಿಳೆ ಕೊಲೆ ಗೈದಿದ್ದ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು : ದಲಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದ ಆರೋಪಿಗಳಿಗೆ 14 ವರ್ಷಗಳ ನಂತರ ತುಮಕೂರಿನ 3ನೇ ಅಧಿಕ ಸತ್ರ ನ್ಯಾಯಾಲಯ 21 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2010 ರ ಜೂನ್ 28 ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿಯ ಗೋಪಾಲಪುರ ಗ್ರಾಮದ ಡಾಬಾ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಸಾಯಿಸಿದ್ದ ಪ್ರಕರಣದಲ್ಲಿ 27 ಆರೋಪಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು, ಅದರಲ್ಲಿ 6 ಆರೋಪಿಗಳು ಸಾವನ್ನಪ್ಪಿದ್ದಾರೆ.

ಉಳಿದ 21ಆರೋಪಿಗಳ ಅಪರಾಧ ಸಾಭೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸತ್ರ ನ್ಯಾಯಾಲಯ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5000 ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಎ.ನಾಗಿರೆಡ್ಡಿ ತೀರ್ಪು ನೀಡಿದ್ದಾರೆ.

Naveen Kumar U

Managing Editor

Related Articles

Leave a Reply

Your email address will not be published. Required fields are marked *

Back to top button