ಸುದ್ದಿ

ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಮಧುಗಿರಿ ಡಿವೈಎಸ್‌ಪಿ… ವಿಡಿಯೋ ವೈರಲ್‌!

ತುಮಕೂರು : ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿಯೇ ನ್ಯಾಯ ಕೊಡಿಸಬೇಕಾದ ಪೊಲೀಸರು ಸ್ತ್ರೀ ಭಕ್ಷಕರಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ಕಚೇರಿಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ರಾಜ್ಯ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ

ಹೌದು.. ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೋ ವೈರಲ್‌ ಆಗಿದೆ. ಜಮೀನು ವಿಚಾರದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ರಾಸಲೀಲೆ ನಡೆಸಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ತನಗೆ ನ್ಯಾಯ ಸಿಗಬೇಕಾದರೆ ಇಂತಹ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ.

ಈ ವೇಳೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ.

ಡಿವೈಎಸ್‌ಪಿ ರಾಮಚಂದ್ರಪ್ಪ ಅವರ ಈ ವರ್ತನೆ ರಾಜ್ಯ ಪೊಲೀಸ್ ಇಲಾಖೆಯ ಘನತೆಗೆ ಮಸಿ ಬಳಿದಿದೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇಂತಹ ವಿಕೃತ ಮನಸ್ಥಿತಿ ಇರುವವರಿಗೆ ಬುದ್ಧಿ ಕಲಿಸಬೇಕು ಎಂದು ವಿಡಿಯೋ ನೋಡಿದವರು ಒತ್ತಾಯಿಸಿದ್ದಾರೆ.

ಘಟನಾ ಸಂಬಂಧ ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯೆ : ‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

Naveen Kumar U

Managing Editor

Related Articles

Leave a Reply

Your email address will not be published. Required fields are marked *

Back to top button