ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳಿಂದ ದುರುಪಯೋಗ ಆರೋಪ?
ಇದು ಸಾಮಾಜಿಕ ಕನ್ನಡಿ
ಕೊಡಗು :ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ
ರಾಜ್ಯಾಧ್ಯಾಂತ ಕೆಲವು ಮೇಲ್ವರ್ಗದ ಸಮುದಾಯಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸರಕಾರದಿಂದ ಉಧ್ಯೋಗವಕಾಶಗಳನ್ನು ಹಾಗೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವುದು
ಕಂಡು ಬರುತ್ತಿದೆ. ಇದರಿಂದ
ಮೂಲ ಹಾಗೂ ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೌಲಭ್ಯದಿಂದ ವಂಚಿತರಾಗಿ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಇದೊಂದು ರೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲೆ ನೆಡೆಯುತ್ತಿರುವ ಶೋಷಣೆ ಹಾಗೂ ದೌರ್ಜನ್ಯ ವಾಗಿರುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾದ್ಯಮ ವಕ್ತಾರರಾದ ಡಿ ಆರ್.ವೇದಕುಮಾರ್ ಮಾದ್ಯಮದ ಮೂಲಕ ಮನವಿ ಮಾಡಿಕೊಂಡಿದ್ದಾರೆ
ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೌಲಭ್ಯದಿಂದ ವಂಚಿತರಾಗಿ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಇದೊಂದು ರೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲೆ ನೆಡೆಯುತ್ತಿರುವ ಶೋಷಣೆ ಹಾಗೂ ದೌರ್ಜನ್ಯ ವಾಗಿರುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ನೈಜ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾದ್ಯಮ ವಕ್ತಾರರಾದ ಡಿ ಆರ್.ವೇದಕುಮಾರ್ ಮಾದ್ಯಮದ ಮೂಲಕ ಮನವಿ ಮಾಡಿಕೊಂಡಿದ್ದಾರೆ
ವರದಿಗಾರರು : ಫ್ರೆಡ್ಡಿ PC