ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಪ್ರಕರಣ: ತನಿಖೆಗೆ ವಿಶೇಷ ತನಿಖಾ ತಂಡ ರಚನೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಬಿದ್ದಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನಾಕ್ರೋಶ ಸೃಷ್ಟಿಸಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಎಸ್‌ಐಟಿ (SIT) ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ Xನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ Xನಲ್ಲಿ ತಿಳಿಸಿದ್ದಾರೆ.
ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿಜೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನಲಾಗಿದೆ.