ಸುದ್ದಿ

ಬಿಗ್‌ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಮಕ್ಕಳ ಕಳ್ಳಿ? ಪಾರು ಸೀರಿಯಲ್‌ ನಟಿಯ ಮುಗ್ಧತೆ ಹಿಂದೆ ಕರಾಳ ಮುಖ!

ಸದ್ಯ ಬಿಗ್‌ಬಾಸ್‌ನಲ್ಲಿ ತಮ್ಮ ಮುಗ್ಧ ಮುಖದಿಂದ, ಅಷ್ಟೇ ಸಾಫ್ಟ್‌ ಆಗಿ ಇರುವಲ್ಲಿ ನಟಿ ಮೋಕ್ಷಿತಾ ಪೈ ಎಲ್ಲರ ಮನಸ್ಸನ್ನು ಗೆಲ್ಲುತ್ತಿದ್ದಾರೆ. ಬಿಗ್‌ಬಾಸ್‌ಗೂ ಮುನ್ನ ಪಾರು ಸೀರಿಯಲ್‌ನ ನಟನೆಯಿಂದ ಮನೆ ಮಾತಾಗಿದ್ದವರು ಈಕೆ. ಐದು ವರ್ಷಗಳಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ಪಾರು (Paaru) ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.ಅರಸನ ಕೋಟೆಯ ಮನೆ ಕೆಲಸದಾಳುವಾಗಿರುವ ಪಾರು ಅದೇ ಮನೆಗೆ ಸೊಸೆಯಾಗಿ ಬಂದ ನಂತರ ನಡೆದಿರುವ ಘಟನೆಗಳ ಸುತ್ತಲೂ ಈ ಧಾರಾವಾಹಿಯ ಕಥೆ ಹೆಣೆಯಲ್ಪಟ್ಟಿದೆ. ಈ ಧಾರಾವಾಹಿಯಲ್ಲಿ ಪಾರುವಿನದ್ದು ತ್ಯಾಗಮಯ ಪಾತ್ರ. ಅದು ಎಷ್ಟರಮಟ್ಟಿಗೆ ಎಂದರೆ ಮೈದುನನ ಪತ್ನಿಗಾಗಿ ತನ್ನ ಮಗುವನ್ನೇ ತ್ಯಾಗ ಮಾಡಿದ್ದಾಳೆ. ಮೈದುನನ ಪತ್ನಿ ಜನನಿ ತನ್ನ ಮಗುವನ್ನು ಕಳೆದುಕೊಂಡಾಗ ಅದು ಆಕೆಗೆ ಗೊತ್ತಾಗಬಾರದು ಎಂದು ಪಾರು ತನ್ನ ಮಗುವನ್ನೇ ಆಕೆಗೆ ಕೊಟ್ಟಿದ್ದಾಳೆ. ಇದು ಜನನಿಗೆ ತಿಳಿದಿರಲಿಲ್ಲ. ಕೊನೆಗೂ ಅಂತ್ಯದಲ್ಲಿ ಎಲ್ಲವೂ ತಿಳಿದು ಸೀರಿಯಲ್​ ಸುಖಾಂತ್ಯವಾಗಿದೆ. ಇಂಥ ತ್ಯಾಗಮಯ ಪಾತ್ರ ಮಾಡಿದವರು ಮೋಕ್ಷಿತಾ.ಆದರೆ ಇದೀಗ ನಟಿಯ ಭಯಾನಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಈಕೆ ಮಕ್ಕಳ ಕಳ್ಳಿ ಎನ್ನುವ ವಿಷಯ ಬಹಿರಂಗಗೊಂಡಿದೆ! ಹತ್ತು ವರ್ಷಗಳ ಹಿಂದೆ ಅಂದರೆ 2014ರಲ್ಲಿ ಬಾಲಕಿಯೊಬ್ಬಳನ್ನು ಗೆಳೆಯನ ಜೊತೆಗೂಡಿ ಅಪಹರಣ ಮಾಡಿ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನುವ ಆರೋಪ ಇವರ ಮೇಲಿದೆ. ಬಿ.ಕಾಂ ಮುಗಿಸಿದ ಬಳಿಕ ಟ್ಯೂಷನ್‌ ತೆಗೆದುಕೊಳ್ಳುತ್ತಿದ್ದ ಮೋಕ್ಷಿತಾ ಅವರಿಗೆ ಆಗ ಇಪ್ಪತ್ತು ವರ್ಷ ವಯಸ್ಸು. ತಮ್ಮ ಬಳಿ ಟ್ಯೂಷನ್‌ಗೆ ಬರುತ್ತಿದ್ದ ಬಾಲಕಿಯನ್ನೇ ಅಪಹರಣ ಮಾಡಿಸಿರುವ ಗಂಭೀರ ಆರೋಪದ ಮೇಲೆ ಜೈಲಿಗೆ ಕೂಡ ಹೋಗಿ ಬಂದಿದ್ದಾರೆ ಮೋಕ್ಷಿತಾ. ಎಂಬಿಎ ಪದವೀಧರನಾಗಿಯೂ ನಿರುದ್ಯೋಗಿ ಆಗಿದ್ದ ಅಲೆಮಾರಿ ಗೆಳೆಯನಿಗಾಗಿ ಈ ಖತರ್ನಾಕ್‌ ಪ್ಲ್ಯಾನ್‌ ಮಾಡಿರುವುದು ತನಿಖೆಯಿಂದ ಬಯಲಾಗಿತ್ತು. ನಾಗಭೂಷಣ್‌ ಎನ್ನುವ 26 ವರ್ಷದ ಗೆಳೆಯನ ಮಾತು ಕೇಳಿ ನಟಿ ಹೀಗೆಲ್ಲಾ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ!

Naveen Kumar U

Managing Editor

Related Articles

Leave a Reply

Your email address will not be published. Required fields are marked *

Back to top button