ಸುದ್ದಿ
ಬೆಂಗಳೂರಲ್ಲಿ ಆಟೋದಲ್ಲಿ ಹೊರಟಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆರೋಪ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆಸಲಾಗಿದೆ. ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ.
ಕೋರಮಂಗಲ ಬಳಿಯ ಪಬ್ ಗೆ ಬಂದಿದ್ದ ಯುವತಿ ತಡರಾತ್ರಿ ಬೈಕ್ ನಲ್ಲಿ ತೆರಳಿದ್ದಳು. ಈ ವೇಳೆ ಬೈಕ್ ಅಪಘಾತವಾಗಿದೆ.
ಈ ಹಿನ್ನೆಲೆಯಲ್ಲಿ ಯುವತಿ ಬೈಕ್ ಬಿಟ್ಟು ಆಟೋದಲ್ಲಿ ಮನೆಗೆ ತೆರಳಿದ್ದಾಳೆ. ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಹೆಚ್.ಎಸ್.ಆರ್ ಲೇಔಟ್ ಬಳಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ತಿಳಿದುಬಂದಿದೆ.
ಸಂತ್ರಸ್ತ ಯುವತಿಯನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.