ಸುದ್ದಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರಾದ್ಯಂತ ಭರ್ಜರಿ ಬೆಟ್ಟಿಂಗ್‌ ಭರಾಟೆ! ಡಾಕ್ಟರ್ ಕೊಡುತ್ತಾರ ಕೈ ಗೆ ಶಾಕ್!!

ರಾಮನಗರ : ತೀವ್ರ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಕ್ಷೇತ್ರದಾದ್ಯಂತ ಬೆಟ್ಟಿಂಗ್‌ ಭರಾಟೆ ಜೋರಾಗಿದ್ದು ಎಲ್ಲ ಪಕ್ಷಗಳ ಮುಖಂಡರು ನಮ್ಮದೇ ಗೆಲುವು ಎಂದು ಬೀಗುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರವಾರು ಮತಗಳಿಕೆ ಬಗ್ಗೆಯೂ ಚರ್ಚೆ ಜೋರಾಗಿದೆ.

ಏಪ್ರಿಲ್‌ 26 ರಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ(Bengaluru rural Lok sabha constituency) ಚುನಾವಣೆ ನಡೆದಿತ್ತು. ಮತದಾನ ನಡೆದು ಬರೋಬ್ಬರಿ 36 ದಿನಗಳು ಕಳೆದಿದ್ದು, ಜೂ.4ರಂದು ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆ ದಿನ ಹತ್ತಿರವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಬೆಟ್ಟಿಂಗ್‌ ಭರಾಟೆಯೂ ಭರ್ಜರಿಯಾಗಿ ನಡೆಯುತ್ತಿದ್ದು, ಲಕ್ಷ ಲಕ್ಷ ಬಾಜಿ ಕಟ್ಟುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಗುಟ್ಟಾಗೇನೂ ಇಲ್ಲ.

ಕೈ ಪಾಳಯದಲ್ಲಿ ಗೆಲುವಿನ ಲೆಕ್ಕಾಚಾರ:

ಕಾಂಗ್ರೆಸ್‌ ಮತ್ತು ಬಿಜೆಪಿ -ಜೆಡಿಎಸ್‌ ಮೈತ್ರಿ ಪಕ್ಷಗಳೂ ಗೆಲುವು ನಮ್ಮದೇ ಎಂದು ಬೀಗುತ್ತಿವೆ. ಕಾಂಗ್ರೆಸ್‌ ಪಕ್ಷದ ಮುಖಂಡರು ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ನಮ್ಮದೇ ಶಾಸಕರಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಡಿಕೆ ಸಹೋದರರು ಹೆಚ್ಚಿನ ವರ್ಕ್ ಔಟ್ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ದಕ್ಷಿಣ ಹಾಗೂ ಚನ್ನಪಟ್ಟಣ ಹೊರತುಪಡಿಸಿದರೆ ಮಿಕ್ಕೆಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಭಾರೀ ಅಂತರದ ಮತಗಳನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್(Dr CN Manjunath) ಅವರಿಗೆ ಲೀಡ್‌ ಬಂದರೂ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಲಿದ್ದು ಗೆಲುವು ನಿರಾಯಾಸವಾಗಲಿದೆ ಎಂಬ ಲೆಕ್ಕಾಚಾರ ಹಾಕಲಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೊಂದಿರುವ ಶಾಸಕರ ಬಲ ಹಾಗೂ ಗ್ಯಾರಂಟಿಗಳ ಪ್ರಭಾವದ ಮೇಲೆ ನಂಬಿಕೆ ಇರಿಸಿದ್ದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

Naveen Kumar

Managing Editor

Related Articles

Leave a Reply

Your email address will not be published. Required fields are marked *

Back to top button