ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ: ಲಾಠಿ ಚಾರ್ಜ್
ಬೆಳಗಾವಿ : ಜಿಲ್ಲೆಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಂತ ಸಂದರ್ಭದಲ್ಲಿಯೇ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ.
ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 20ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ.