ಸುದ್ದಿ
Trending

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ವಿಧಿವಶ

ನವದೆಹಲಿ (ಡಿ.26): ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು.

ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು. ಮನ್‌ಮೋಹನ್‌ ಸಿಂಗ್ ಅವರು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರವಿದ್ದರು ಮತ್ತು 2024ರ ಆರಂಭದಿಂದಲೂ ಅವರ ಆರೋಗ್ಯ ಚೆನ್ನಾಗಿರಲಿಲ್. 2024ರ ಜನವರಿಯಲ್ಲಿ ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಮಗಳ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು.

Related Articles

Leave a Reply

Your email address will not be published. Required fields are marked *

Back to top button