S M E W

Loading

Blog Details

newsnkannada.com > Blog > ಅಪರಾಧ > ಯುವತಿಯರಿಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ: ಮೂವರು ಮಹಿಳೆಯರಿಗೆ ಕಠಿಣ ಶಿಕ್ಷೆ

ಯುವತಿಯರಿಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ: ಮೂವರು ಮಹಿಳೆಯರಿಗೆ ಕಠಿಣ ಶಿಕ್ಷೆ

ಹಣ ನೀಡುವ ಆಮಿಷವೊಡ್ಡಿ ಮನೆಗೆ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಭದ್ರಾವತಿಯ ಮೂವರು ಮಹಿಳೆಯರಿಗೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.61 ಲಕ್ಷ ರೂ. ದಂಡ ವಿಧಿಸಿ ಶನಿವಾರ ಆದೇಶಿಸಿದೆ.ಭದ್ರಾವತಿಯ ಚಂದ್ರಕಲಾ, ಶಿಲ್ಪಾ ಮತ್ತು ಕವಿತಾ ಶಿಕ್ಷೆಗೆ ಒಳಗಾದವರು. 2021ರ ಡಿಸೆಂಬರ್ 24ರಂದು ಭದ್ರಾವತಿಯ ಮನೆಯೊಂದರ ಮೇಲೆ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಪೇಪರ್ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಕರಣದ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭದ್ರಾವತಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು ವಿಚಾರಣೆ ನಡೆಸಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ.

Leave A Comment

All fields marked with an asterisk (*) are required