ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲು; ಅಚ್ಚರಿಯ ಆದೇಶ!
ಸೂರಜ್ ರೇವಣ್ಣ ಅವರಿಗೆ ಆಘಾತ ಎದುರಾಗಿದೆ. ಹಾಸನದಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಂಗಳೂರಿಗೆ ಕರೆ ತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಹಾಸನದ ಸೆನ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸೂರಜ್ ರೇವಣ್ಣ ಅವರ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ವಿಚಾರ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಸೂರಜ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ತಮ್ಮ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ಹಾಗೂ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿದೆ. ಇದೀಗ ಪ್ರಜ್ವಲ್, ದರ್ಶನ್ ಅವರ ಬೆನ್ನಲ್ಲೇ ಸೂರಜ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.