ಶನಿವಾರಸಂತೆ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಕೊಡ್ಲಿಪೇಟೆ :ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಶನಿವಾರಸಂತೆಯ ತ್ಯಾಗರಾಜ ಕಾಲೋನಿ ಹಾಗೂ ಕೊಡ್ಲಿಪೇಟೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರೊಬೇಷನರಿ ಐ ಪಿ ಎಸ್ ಅಧಿಕಾರಿ ಡಾ|| ಬೆನಕಪ್ರಸಾದ್.ಎನ್.ಜೆ, ಶನಿವಾರಸಂತೆ ಪೊಲೀಸ್ ಠಾಣೆ, ಪಿಎಸ್ಐ ಚಂದ್ರು,ಗೋವಿಂದರಾಜ್ ಹಾಗೂ ಹರ್ಷ, ಶಿವಪ್ಪ, ಮಹೇಶ್ ಡಿಂಪಲ್ ಶಸಿ,ಮಂಜುನಾಥ್ ಮತ್ತು ಇತರ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 22-02-2025 ರಂದು ಏಕಕಾಲದಲ್ಲಿ ಶನಿವಾರಸಂತೆಯ ತ್ಯಾಗರಾಜ ಕಾಲೋನಿಯಲ್ಲಿ ಮತ್ತು ಮತ್ತು ಕೊಡ್ಲಿಪೇಟೆಯಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಶನಿವಾರಸಂತೆಯ ತ್ಯಾಗರಾಜ ಕಾಲೋನಿ ನಿವಾಸಿ ಯೋಗೇಶ್, (25 ವರ್ಷ) ಮತ್ತು ದೊಡ್ಡಕೊಡ್ಡಿ ನಿವಾಸಿ ಮೊಹಮ್ಮದ್ ಅಸ್ಕರ್, (40 ವರ್ಷ) ಎಂಬುವವರನ್ನು ಒಟ್ಟು 240 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವರದಿಗಾರರು
ಫ್ರೆಡ್ಡಿ PC