ಗ್ರಾಮ ಸ್ವಚ್ಛತೆಗೆ ದೊಡ್ಡ ಹೆಜ್ಜೆ: ಕೊಡ್ಲಿಪೇಟೆಯಲ್ಲಿ ಸ್ವಚ್ಛತಾ ಆಂದೋಲನ ಆರಂಭ

ಕೊಡ್ಲಿಪೇಟೆ(ನ್ಯೂಸ್ ಎನ್ ಕನ್ನಡ ): ಪರಿಸರ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕೊಡ್ಲಿಪೇಟೆ ಗ್ರಾಮ ಪಂಚಾಯತ್ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪ್ರತಿದಿನ ಸ್ವಚ್ಛತಾ ಕಾರ್ಯಗಳನ್ನು ಸಮರ್ಪಕವಾಗಿ ಹಮ್ಮಿಕೊಂಡು ಪರಿಸರವನ್ನು ಸ್ವಚ್ಛವಾಗಿಡುವುದು ಅಗತ್ಯ ಎಂದು ತಿಳಿಸಿದರು. ಸಾರ್ವಜನಿಕರು ಸಹ ಪಂಚಾಯತ್ ಜೊತೆ ಕೈಜೋಡಿಸಿ ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವ ಮೂಲಕ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ, ಕರ ವಸೂಲಿಗಾರ ದೀಪಕ್, ಸ್ವಚ್ಛತಾ ಕಾರ್ಮಿಕರಾದ ಕಾಂತರಾಜ್, ರಾಜು ಸೇರಿದಂತೆ ಪಂಚಾಯತ್ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಈ ವೇಳೆ ಸ್ಥಳದಲ್ಲಿದ್ದ ನಾಗರಿಕರು ಪಟ್ಟಣದ ಎಲ್ಲಾ ಬೀದಿ-ಬದಿಗಳನ್ನೂ ಸಂಪೂರ್ಣವಾಗಿ ಸ್ವಚ್ಛಗೊಳಿಸುವಂತೆ ಪಂಚಾಯತ್ ಆಡಳಿತಕ್ಕೆ ಮನವಿ ಮಾಡಿದರು.
📢 ಮಾಹಿತಿ ಮತ್ತು ಜಾಹೀರಾತುಗಾಗಿ ವಿನಂತಿ: ನಿಮ್ಮ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಸ್ಥಳೀಯ ಸುದ್ದಿ, ಸಾಮಾಜಿಕ ಚಟುವಟಿಕೆ ಅಥವಾ ಸಾರ್ವಜನಿಕ ಹಿತಾಸಕ್ತಿಯ ಮಾಹಿತಿಯನ್ನು ನೀವು ಹೊಂದಿದ್ದರೆ, ದಯವಿಟ್ಟು ಅದನ್ನು ಪ್ರಕಟಣೆಗಾಗಿ ನಮ್ಮ ಸುದ್ದಿ ಪೋರ್ಟಲ್ನೊಂದಿಗೆ ಹಂಚಿಕೊಳ್ಳಿ. ಜಾಹೀರಾತು ಮತ್ತು ಪ್ರಚಾರಕ್ಕಾಗಿ ನೀವು ನಮ್ಮನ್ನು ಸಂಪರ್ಕಿಸಬಹುದು. ಸಂಪರ್ಕದಲ್ಲಿರಲು ನಮ್ಮನ್ನು ಸಂಪರ್ಕಿಸಿ ಪುಟಕ್ಕೆ ಭೇಟಿ ನೀಡಿ. ಧನ್ಯವಾದಗಳು!
Was this article helpful?
YesNo

