ಕೊಡಗು ಜಿಲ್ಲೆಯಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮಹತ್ವದ ಆದೇಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
ಗಣೇಶ ಚತುರ್ಥಿ, ದಸರಾ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕಗಳಿಂದ ಉಂಟಾಗುವ ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
2026ರ ಸೆಪ್ಟೆಂಬರ್ 10ರಿಂದ ಅಕ್ಟೋಬರ್ 31ರವರೆಗೆ ಕೊಡಗು ಜಿಲ್ಲೆಯಾದ್ಯಂತ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ನಿರ್ಬಂಧ ಹಾಗೂ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ Noise Pollution (Regulation and Control) Rules, 2000 ಮತ್ತು ಸಂಬಂಧಿತ ಕಾನೂನುಗಳನ್ವಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ವಿಶೇಷವಾಗಿ ಹಬ್ಬ, ಮೆರವಣಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣವಾಗುವಂತೆ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್. ಅವರಿಂದ ಸೆಪ್ಟೆಂಬರ್ 11, 2026ರಂದು ಆದೇಶ ಹೊರಡಿಸಲಾಗಿದೆ.
ವರದಿಗಾರರು
ಜಾನ್ಸನ್ ಕೊಡಗು
Live Cricket Info







