ಕೊಡ್ಲಿಪೇಟೆಯಲ್ಲಿ ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್.

ಕೊಡಗು:ಕೊಡ್ಲಿಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ!
ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನತೆ.
- ಕೊಡ್ಲಿಪೇಟೆಯಲ್ಲಿ ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್
ಕರವೇ (ನಾರಾಯಣ ಗೌಡ ಬಣ) ಹಾಗೂ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ.
ನಮಸ್ಕಾರ, ಇದು ಈ ಕ್ಷಣದ ಬ್ರೇಕಿಂಗ್ ನ್ಯೂಸ್!
ಕೊಡ್ಲಿಪೇಟೆಯಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ ಕಟ್ಟೆಯೊಡೆದಿದೆ. ಸ್ಥಳೀಯ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದ ಧೋರಣೆಯನ್ನು ಖಂಡಿಸಿ ಇಂದು ಜನತೆ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಈ ಹೋರಾಟ ತೀವ್ರಗೊಂಡಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಿರುವ ಆಕ್ರೋಶಿತ ಜನತೆ, ಸ್ವಯಂ ಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ತಮ್ಮ ವಿರೋಧವನ್ನು ದಾಖಲಿಸುತ್ತಿದ್ದಾರೆ. ಇಡೀ ಕೊಡ್ಲಿಪೇಟೆ ಸಂಪೂರ್ಣ ಸ್ತಬ್ಧವಾಗಿದ್ದು, ಪ್ರತಿಭಟನಾ ಕಾವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ.
ಫ್ರೆಡ್ಡಿ ಪಿಸಿ
ವರದಿಗಾರರು
Live Cricket Info






