ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ
ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ.
ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು.ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.