ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್ ಗೆ ಬೇಲಾ!! ಜೈಲಾ!!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ ಕೃತ್ಯದಲ್ಲಿ ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಕೊಲೆ ಪ್ರಕರಣ ಸಂಬಂಧ ಈಗಾಗಲೇ 100ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿರುವ ಪೊಲೀಸರು. ದರ್ಶನ್ ಸೇರಿ ಎಲ್ಲ 17 ಆರೋಪಿಗಳನ್ನು ನಾಳೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ ಕೊಲೆ ಪ್ರಕರಣ ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಒಂದು ಬಾರಿ ಕಸ್ಟಡಿ ವಿಸ್ತರಣೆ ಮಾಡಿ ತನಿಖೆ ನಡೆಸಿರುವ ಪೊಲೀಸರು ನಾಳೆ ದರ್ಶನ್ ಸೇರಿ ಇತರರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಘಟನೆ ಕುರಿತು ದರ್ಶನ್ ಘಟನೆ ಕುರಿತು ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು 100ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬೆಳವಣಿಗೆ ನಡುವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಒತ್ತಡಗಳು ಕೇಳಿಬಂದಿರುವ ಮಾಹಿತಿಯೂ ಬಯಲಾಗಿದೆ.

ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ರನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು. ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆಹಾಕಿದ್ದಾರೆ. ಜೂನ್ 11 ರಂದು ರೇಣುಕಾಸ್ವಾಮಿ ಹತ್ಯೆ ಸಂಬಂಧ ದರ್ಶನ್ ರನ್ನ ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಿದ ಬಳಿಕ ಪ್ರಕರಣ ಸಂಬಂಧ ಒಂಭತ್ತು ದಿನಗಳ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರೋ ನಟ ದರ್ಶನ್, ಒಂದು ವೇಳೆ ನಾಳೆ ಕೋರ್ಟ್ ಮತ್ತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ರೆ ಪರಪ್ಪನ ಅಗ್ರಹಾರ ಜೈಲು ಸೇರಲಿರೋ ನಟ ದರ್ಶನ್. ಈ ಹಿಂದೆ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಮೊದಲ ಬಾರಿಗೆ ಜೈಲು ಸೇರಿದ್ದ ನಟ.

Related Articles

Leave a Reply

Your email address will not be published. Required fields are marked *

Back to top button