ಕನಕಪುರ ರೋಡ್ ಜಂಕ್ಷನ್, ಕಾಮಾಕ್ಯ ಜಂಕ್ಷನ್ನಲ್ಲಿ ನಿರ್ಮಾಣವಾಗಲಿದೆ
ಬೆಂಗಳೂರು (ನ್ಯೂಸ್ ಎನ್ ಕನ್ನಡ ) ಜೆಪಿ ನಗರ ಮೆಟ್ರೋ ಸ್ಟೇಷನ್ನಿಂದ ಕೆಂಪಾಪುರ ಮಾರ್ಗಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಆರೆಂಜ್ ಮಾರ್ಗದಲ್ಲಿ ಎರಡು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಅಸ್ತು ಎಂದಿದೆ. 507 ಕೋಟಿ ರುಪಾಯಿ ವೆಚ್ಚದಲ್ಲಿ ಜೆಪಿ ನಗರ ಮೆಟ್ರೋ ಸ್ಟೇಷನ್ ಬಳಿಯ ಕನಕಪುರ ರೋಡ್ ಜಂಕ್ಷನ್ನಲ್ಲಿ ಒಂದು ಡಬಲ್ ಡೆಕ್ಕರ್ ಫ್ಲೈ ಓವರ್ ಹಾಗೂ ಕಾಮಾಕ್ಯ ಜಂಕ್ಷನ್ನಲ್ಲಿ ಮತ್ತೊಂದು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಬಿಎಂಆರ್ಸಿಎಲ್ ಮುಂದಾಗಿದೆ
ಒಂದೇ ಮೆಟ್ರೋ ಮಾರ್ಗದಲ್ಲಿ ಎರಡು ಡಬಲ್ ಡೆಕ್ಕರ್: ದಕ್ಷಿಣ ಭಾರತದಲ್ಲೇ ಮೊದಲುಇದರೊಂದಿಗೆ, ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಒಂದೇ ಮೆಟ್ರೋ ಮಾರ್ಗದಲ್ಲಿ ಎರಡು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಿದ ಹೆಗ್ಗಳಿಗೆ ಬೆಂಗಳೂರಿನದ್ದಾಗಲಿದೆ. ಕೆಳಗಡೆ ವಾಹನಗಳು, ಮಧ್ಯ ಭಾಗದಲ್ಲಿ ಫ್ಲೈ ಓವರ್ ಅದರ ಮೇಲ್ಭಾಗದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ.ಎರಡು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣದ ಬಗ್ಗೆ ಬಿಎಂಆರ್ಸಿಎಲ್ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ.