ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ(Tejasvi Surya) ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸಿ ಸಂಸದ ತೇಜಸ್ವಿ ಸೂರ್ಯ ಆರ್ವಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಖಾಲಿ ಟ್ರಂಕ್ ಹಿಡಿದುಕೊಂಡು ಆಗಮಿಸಿದರು.ಅಲ್ಲದೇ ಆರ್ವಿ ರಸ್ತೆಯಿಂದ ನ್ಯಾಷನಲ್ ಕಾಲೇಜಿಗೆ ಮೆಟ್ರೋ ಟಿಕೆಟ್ ಪಡೆದು, ಟ್ರಂಕ್ ಜೊತೆಗೆ ಪ್ರಯಾಣಿಸಲು ಮುಂದಾದರು. ಆದರೆ ಮೆಟ್ರೋ