ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!
Cancer Prevention Tips: ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜೀವನಶೈಲಿಯಲ್ಲಿನ ಬದಲಾವಣೆಗಳಿಂದ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು. ಜಾಗತಿಕವಾಗಿ ಕ್ಯಾನ್ಸರ್ಗೆ ಪ್ರಮುಖ ಕಾರಣಗಳಾಗಿರುವ ಇವುಗಳನ್ನ ತ್ಯಜಿಸುವುದರಿಂದ ಈ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ಜಗತ್ತಿನಾದ್ಯಂತ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಸುಧಾರಣೆಗಳಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು